‘ಸಂಧ್ಯಾ’ ಕಾಲದಲಿ ‘ಅನರ್ಘ್ಯ’ ‘ಶ್ರೀಕರ’ನ ‘ರೇಷ್ಮೆ’ಯ‘ಕಿರಣ’ಗಳು ‘ಅನು’ದಿನವು ‘ಶ್ವೇತ’ಪತ್ರಗಳ ಮೇಲೆ ‘ಮಂಜಿ’ನ ‘ಹನಿ’ಯ ಸುರಿಸುತ ‘ನೆನೆಸಿ’‘ಸುನೀಲಾ’ಕಾಶದಲಿ ‘ರಜತ’ ಮೇಘಗಳ ‘ಅಂಜಿ’ಸಿ ಹುತ’ವಹಾಬ’ನ ಹಿಂದಿಕ್ಕಿ ಹರಿಸುತ ‘ವಿಭಾ’ವಳಿಯ‘ಚೆನ್ನ-ವಿಶ್ವ’ದಲಿ ಮುರುಳಿ ‘ರಾಯ’ನ ‘ಶೃತಿ’ಯ ‘ಮೋಹಿಸುತ’‘ಜೇನ”ಸುವರ್ಚಲ’ ‘ಪ್ರಶಾಂತ’ ಮನಸಿನಲಿ‘ಹುಚ್ಚ’ನ ಗುರು-‘ಪ್ರೇಮ’ ಕವಿತೆಗಳ ‘ನವೀನ’ ‘ಕಾವ್ಯದಿಂಚರ’ಗಳು ಕಡೆದು‘ಅಶ್ವಿನಿ’ಯ ‘ರೂಪ’ವಿಹ ‘ವಜ್ರಕಾಯ’ನ ‘ಕೀರ್ತಿ’ಯ ಮಿತ್ರ,ಉರದಿ ‘ನಾಗ’ವ ಧರಿಸಿಹ ಗುರು-‘ಗಣೇಶ’ನ ‘ಪೂಜೆ’ಯ ‘ವಿನಯ’ದಿ ‘ಅರ್ಚಿಸಿ’ಹೆಸರ ಅರಿಯದ ಗುರುವ ಕ್ಷಮಿಸೆಂದು ಬೇಡುತಸಹಸ್ರ ‘ಮನುಷ್ಯ’ ಜನುಮದಲಿ ‘ಸಂತೋಷ’ಕೆ ‘ಮೇರೆ’ಗಳಿಲ್ಲದೆ ನೀವು ಬದುಕಿ , ನಾವು ನಿಮ್ಮ ಪಾದದ ಧೂಳಾಗಿರಲೆಂದು ‘ಶ್ರೀದೇವಿಗೆ’‘ಅಶೋಕ’ವನದಡಿಗಿರುವ ಇವರೆಲ್ಲರಿಗೂ ‘ಶಿಕ್ಷಕರ-ದಿನಾಚರಣೆ’ಯ ದಿನ ಆಶೀರ್ವಾದಗಳ ‘ಅಕ್ಷಯ-ಪ್ರಸಾದವನು’ ನೀಡೆನುತ ಕೇಳುತಲಿ…..
ತೃತೀಯ ಬಿ ಎ , ವಿಧ್ಯಾರ್ಥಿ